ಅರೇಬಿಕ್ ಅಕ್ಷರಗಳುಳ್ಳ ತ್ರಿವರ್ಣ ಧ್ವಜ ಹಾರಾಟ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 23. ರಾಷ್ಟ್ರಧ್ವಜದ ಮೇಲಿದ್ದ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರಗಳನ್ನು ಹಾಕಿ ಧ್ವಜ ಹಾರಿಸಿದ ಇಬ್ಬರು ಯುವಕರನ್ನು ಕೊಪ್ಪಳ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಯುವಕರನ್ನು ಯಲಬುರ್ಗಾ ಪಟ್ಟಣದ ಮಹ್ಮದ್ ದಾನೀಶ್ ಕುತುಬುದ್ಧೀನ್ ಖಾಜಿ ಹಾಗೂ ಮಹ್ಮದ್ ಆದಿನಾನ್ ಖಾಜಿ ಎಂದು ಗುರುತಿಸಲಾಗಿದೆ. ಈದ್ ಮಿಲಾದ್ ಆಚರಣೆ ವೇಳೆ ಬಟ್ಟೆಯಿಂದ ತ್ರಿವರ್ಣ ಧ್ವಜ ಹೊಲಿದು ಬಿಳಿಬಣ್ಣದ ಜಾಗದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರದಲ್ಲಿ ‘ಲಾ ಇಲ್ಲಾಹ ಇಲ್ಲಾಲ್ಲಾ ಮೊಹಮದ್ ರಸೂಲಲ್ಲಾ’ ಎಂದು ಬರೆಯಲಾಗಿತ್ತು. ಧ್ವಜವನ್ನು ವಿರೂಪಗೊಳಿಸಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಬಳಿಕ ಧ್ವಜವನ್ನು ವಿರೂಪಗೊಳಿಸಿದ್ದ ಇಬ್ಬರು ಯುವಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡರು.

Also Read  ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಓಪನ್ ➤ ವಿದ್ಯಾರ್ಥಿಗಳಿಗೆ ಕೋವಿಡ್-19 ಟೆಸ್ಟ್ ಕಡ್ಡಾಯ

 

error: Content is protected !!
Scroll to Top