ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು..!

Death, deadbody, Waterfall

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಪಣತ್ತೂರು ಕೆರೆಯಲ್ಲಿ ಈಜಾಡುತ್ತಿದ್ದ 22 ವರ್ಷದ ಯುವಕ ಮಧ್ಯದಲ್ಲಿ ಸುಸ್ತಾಗಿ ದಡ ಸೇರಲು ಸಾಧ್ಯವಾಗದೆ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ರಾತ್ರಿ 9 ಗಂಟೆ ಸುಮಾರಿಗೆ ಮೃತದೇಹವನ್ನು ಕೆರೆಯಿಂದ ಹೊರತೆಗೆದರು. ಮೃತನನ್ನು ಪಣತ್ತೂರಿನ ನಿವಾಸಿ ಅನಿಲ್ ಎಂದು ಗುರುತಿಸಲಾಗಿದೆ. ಮೂಲತ: ನೇಪಾಳದವನಾಗಿದ್ದ ಈತ ಪೇಯಿಂಗ್ ಗೆಸ್ಟ್ ವಸತಿ ಗೃಹವೊಂದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

 

Scroll to Top