(ನ್ಯೂಸ್ ಕಡಬ) newskadaba.com ಹೊಸದಿಲ್ಲಿ 23: ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ಉದಯ್ ಭಾನು ಚಿಬ್ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಲಾಗಿದೆ. ಉದಯ್ ಭಾನು ಚಿಬ್ ಅವರು ಭಾರತೀಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪ್ರದೇಶ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಬಿ.ವಿ. ಶ್ರೀನಿವಾಸ್ ಅವರು ಇದುವರೆಗೆಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅವರ ಕೊಡುಗೆಗಳನ್ನು ಪಕ್ಷವು ಶ್ಲಾಘಿಸುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯ್ ಭಾನು ಚಿಬ್ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕ
