ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ನೋಡುವುದು ಪೋಕ್ಸೊ ಕಾಯ್ದೆ- ಐಟಿ ನಿಯಮದಡಿ ಅಪರಾಧ ಸುಪ್ರೀ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ನೋಡುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧವಾಗಿದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯುವ ಕಠಿಣ ಕಾನೂನು ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವ ತೀರ್ಪು ನೀಡಿದೆ.

ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ನೇತೃತ್ವದ ನ್ಯಾಯಪೀಠವು ತಳ್ಳಿಹಾಕಿದೆ. ತೀರ್ಪು ನೀಡುವಲ್ಲಿ ಮದ್ರಸ್ ಉಚ್ಚ ನ್ಯಾಯಾಲಯವು “ಘೋರ ದೋಷ” ಎಸಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Also Read  ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

error: Content is protected !!
Scroll to Top