ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಪದ ಗ್ರಹಣ

(ನ್ಯೂಸ್ ಕಡಬ) newskadaba.com ಕೊಲಂಬೊ 23: ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶದ ಆರ್ಥಿಕತೆ ಬಲಪಡಿಸುವ ಮತ್ತು ಭ್ರಷ್ಟಾಚಾರವನ್ನು ತೊಡೆದು ಹಾಕುವ ಭರವಸೆಯ ನಡುವೆ 56ರ ಹರೆಯದ ಡಿಸಾನಾಯಕೆ ರಾಷ್ಟ್ರಪತಿಗಳ ಕಾರ್ಯದರ್ಶಿ ಕಚೇರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ನಂತರ ರಾಷ್ಟ್ರವನ್ನುದ್ದೇಶಿಸಿ  ಡಿಸಾನಾಯಕೆ ಮಾತನಾಡಿದರು. ಅಧಿಕಾರ ಹಸ್ತಾಂತರದ ಪ್ರಕ್ರಿಯೆಯ ಭಾಗವಾಗಿ ಪ್ರಧಾನಿ ದಿನೇಶ್ ಗುಣವರ್ಧನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.

Also Read  ಪಂಚ ಶ್ರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ಸರಳವಾಗಿ ಅಷ್ಟಮಿ ಆಷರಣೆ

error: Content is protected !!
Scroll to Top