(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆಂಬ್ಯುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.
ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆಂಬ್ಯುಲೆನ್ಸ್ ಗಳು ನೆರವಾಗುತ್ತವೆ ಎಂದರು. ಸದ್ಯ 65 ಆಧುನಿಕ ಮತ್ತು ಪ್ರಾಥಮಿಕ ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ ಸವಲತ್ತುಗಳಿರುವ ಆಂಬ್ಯುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು.