(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಕರ್ನಾಟಕ ಸಾಹಿತ್ಯ ಅಕಾಡೆಮಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪ ಯೋಜನೆಯಡಿ “ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು” ಎಂಬ ಮೂರು ದಿನಗಳ ಕಮ್ಮಟವನ್ನು ಅಕ್ಟೋಬರ್ ಕೊನೆಯ ವಾರದಲ್ಲಿ ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿಯಲ್ಲಿ ಏರ್ಪಡಿಸಲಾಗಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಅಕಾಡೆಮಿ ಕಮ್ಮಟ- ಅರ್ಜಿ ಆಹ್ವಾನ
