ಸೆ.25ರಂದು ಉಳ್ಳಾಲದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11 ಗಂಟೆಯಿಂದ  ಉಳ್ಳಾಲ ನಗರಸಭೆ ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಲಿದೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು. ಅರ್ಜಿದಾರರು ನಮೂನೆ I & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಛೇರಿ ದೂರವಾಣಿ ಸಂಖ್ಯೆ 0824–2950997. 9364062517. ಪೊಲೀಸ್ ಉಪಾಧೀಕ್ಷಕರ ಕಛೇರಿ, ದೂರವಾಣಿ ಸಂಖ್ಯೆ 0824 –2453420 9364062579.  ಪೊಲೀಸ್ ನಿರೀೀಕ್ಷಕರು-1 ಕಛೇರಿ, ದೂರವಾಣಿ ಸಂಖ್ಯೆ 0824-2427237 9364062691. ಪೊಲೀಸ್ ನಿರೀೀಕ್ಷಕರು-2 ಕಛೇರಿ, ದೂರವಾಣಿ ಸಂಖ್ಯೆ 0824-2427237 9364062692. ಪೊಲೀಸ್ ನಿರೀೀಕ್ಷಕರು-3 ಕಛೇರಿ, ದೂರವಾಣಿ ಸಂಖ್ಯೆ 0824-2427237 9364062693. ಪೊಲೀಸ್ ನಿರೀೀಕ್ಷಕರು-4 ಕಛೇರಿ, ದೂರವಾಣಿ ಸಂಖ್ಯೆ 0824-2427237 9364062694  ಸಂರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top