(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. 2024-25ನೇ ಸಾಲಿನಲ್ಲಿ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ಸಮುದಾಯದ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್‍ಎಂ ನರ್ಸಿಂಗ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 10ಕೊನೆಯ ದಿನ.
ವಿದ್ಯಾರ್ಥಿಗಳು https://sevasindhu.karnataka.gov.in/Sevasindhu/DepartmentSer Vices ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ. 2.50 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಹಾಗೂ ಎನ್ ಪಿ ಸಿ ಐ ಮ್ಯಾಪಿಂಗ್ ಆಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ವೀಕ್ಷಿಸಿ ಹಾಗೂ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.