ಕಡಬ: ಬೈಕ್ ಗಳ ಮಧ್ಯೆ ಢಿಕ್ಕಿ ► ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮಾ.08. ಬೈಕ್ ಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಕಡಬ ಸಮೀಪದ ಕಳಾರದಲ್ಲಿ ಬುಧವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಬೈಕ್‌ ಸವಾರ ಕೋಡಿಂಬಾಳ ಗ್ರಾಮದ ವಿದ್ಯಾನಗರ ನಿವಾಸಿ ಇಲ್ಯಾಸ್(48) ಎಂಬವರು ಗಾಯಗೊಂಡಿದ್ದು, ಪುತ್ತೂರಿನ ಚೇತನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಸವಾರ ಬಾಲಕೃಷ್ಣ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top