ನಿಯಮ ಪಾಲಿಸದವರ ಲೈಸೆನ್ಸ್ ರದ್ದುಗೊಳಿಸಿ- ಸಾರಿಗೆ ಸಚಿವರಿಗೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ.23. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ವತಿಯಿಂದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆಯಂಬುಲನ್ಸ್ ಗಳ ಲೋಕಾರ್ಪಣೆ’ ಮಾಡಿದರು.

ಬಳಿಕ ಮಾತನಾಡಿದ ಅವರು, ಅಪಘಾತದ ಸಂದರ್ಭ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕಲ್ಲಿ ನೂರಾರು ಜೀವಗಳನ್ನು ಉಳಿಸಲು ಸಾಧ್ಯವಿದೆ. ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆಯಂಬುಲೆನ್ಸ್ ಗಳು ನೆರವಾಗಲಿವೆ ಎಂದರು. ಸದ್ಯ 65 ಆಧುನಿಕ ಮತ್ತು ಪ್ರಾಥಮಿಕ ಆಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ‌ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ‌ ಸವಲತ್ತುಗಳಿರುವ ಆ್ಯಂಬ್ಯುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು.

Also Read  ಶಾಸಕರು ತಾಳ್ಮೆಯಿಂದರಬೇಕು ಮುಂದೆ ಎಲ್ಲರಿಗೂ ಅವಕಾಶ ಸಿಗಲಿದೆ.!➤ಡಿಕೆ ಶಿವಕುಮಾರ್

 

ವಾಹನದಲ್ಲಿ ಸಂಚರಿಸುವ ವೇಳೆ ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳನ್ನು ತಡೆಯಬಹುದು. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕರೆ ನೀಡಿದರು. ಸಂಚಾರಿ ನಿಯಮ‌ ಪಾಲಿಸದೇ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ.ರೇವಣ್ಣ ಸೇರಿ ಹಲವು ಮುಖಂಡರು ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!
Scroll to Top