ಅಮೀಬಾ ಸೋಂಕಿನಿಂದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 23. ಅಮೀಬಾ ಸೋಂಕಿ (ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್)ನಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟ ವರದಿಯಾಗಿದೆ. ಮೃತಪಟ್ಟವರನ್ನು ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಎಂದು ಗುರುತಿಸಲಾಗಿದೆ.

ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ್ವರ ಕಡಿಮೆಯಾಗದ ಕಾರಣ ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ನಡೆಸಿದ ತಪಾಸಣೆಯಿಂದ ಅಮಿಬಿಕ್ ಸೋಂಕು ದೃಢಪಟ್ಟಿತ್ತು. ಮುಂಬೈಯಿಂದ ಸೋಂಕು ತಗಲಿರಬಹುದು ಎಂದು ಶಂಕಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಯಾವುದೇ ಆತಂಕ ಪಡಬೇಕಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

Also Read  ಕಾಣಿಯೂರು: ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ➤ ಆಸ್ಪತ್ರೆ ಸೀಲ್ ಡೌನ್

 

 

error: Content is protected !!
Scroll to Top