(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.08. ದ.ಕ. ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಕೆ.ಎಂ. ಲತೀಫ್ ಪರ್ತಿಪ್ಪಾಡಿ ಇವರನ್ನು ದ.ಕ. ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಎನ್.ಎಸ್. ಕರೀಂ ಅವರು ಅವರು ನೇಮಕ ಮಾಡಿರುತ್ತಾರೆ.

ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ. ರಮಾನಾಥ ರೈಯವರ ಶಿಫಾರಸ್ಸಿನ ಮೇರೆಗೆ ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಕೊಳ್ನಾಡು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯದರ್ಶಿಯಾದ ಎಂ.ಎಸ್. ಮಹಮ್ಮದ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲೀ ಅವರ ಸಹಕಾರದೊಂದಿಗೆ ನೇಮಿಸಲಾಗಿದೆ.










