ರಜಾದಿನಗಳಲ್ಲಿಯೂ ಇನ್ಮುಂದೆ ಆಸ್ತಿ ನೋಂದಣಿ ಕಾರ್ಯ- ಸಚಿವ ಕೃಷ್ಣಬೈರೇಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ರಾಜ್ಯದಲ್ಲಿ ಸುಗಮ ಆಡಳಿತ ನೀಡುವ ಉದ್ದೇಶದಿಂದ ಮುಂದಿನ ತಿಂಗಳು 21ರಿಂದ ಉಪ-ನೋಂದಣಿ ಕಚೇರಿಗಳು ಶನಿವಾರ ಮತ್ತು ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಈ ಕುರಿತು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 21 ರಿಂದ ಪ್ರತಿ ನೋಂದಣಿ ಜಿಲ್ಲೆಗಳಲ್ಲಿ ಒಂದು ಉಪನೋಂದಣಿ ಕಚೇರಿಯು ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ. ಪ್ರತಿ ನೋಂದಣಿ ಜಿಲ್ಲೆಯಲ್ಲಿ 5-6 ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ ಒಂದು ಕಚೇರಿ ಮಾತ್ರ ರಜೆ ದಿನದಲ್ಲಿ ಕಾರ್ಯನಿರ್ವಹಿಸಲಿದೆ. ರಜೆ ದಿನದಲ್ಲಿ ಕೆಲಸ ಮಾಡುವ ಕಚೇರಿಗೆ ಮಂಗಳವಾರದಂದು ರಜೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

Also Read  ಪಠ್ಯಪುಸ್ತಕಗಳ ವಿಚಾರದಲ್ಲಿ ಮಾಡಿರುವ ಎಡವಟ್ಟುಗಳನ್ನು ತಿದ್ದುತ್ತೇವೆ➤ಡಾ.ಎಚ್.ಸಿ.ಮಹದೇವಪ್ಪ

 

 

error: Content is protected !!
Scroll to Top