(ನ್ಯೂಸ್ ಕಡಬ) newskadaba.com ಸುಳ್ಯ, ಮಾ.08. ಕಳೆದ ಕೆಲವು ವರ್ಷಗಳ ಹಿಂದೆ ಸುಳ್ಯ ತಾಲೂಕಿನ ಕೊಲ್ಲಮೊಗ್ರದಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸಿದ್ದ ಮಹಿಳೆಯೋರ್ವರನ್ನು ತನ್ನ ಪತಿಯೇ ಕುತ್ತಿಗೆಗೆ ಹಗ್ಗ ಬಿಗಿದು ಹತ್ಯೆಗೈದಿದ್ದಲ್ಲದೆ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಸೋಮವಾರಪೇಟೆಯ ಗೌಡಳ್ಳಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರ್ಚನಾ(31) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿಯನ್ನು ಅರ್ಚನಾರ ಪತಿ ಅಂತೋಣಿ(32) ಎಂದು ಗುರುತಿಸಲಾಗಿದೆ. ಪ್ರೇಮ ವಿವಾಹವಾಗಿದ್ದ ಇವರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆದು ತಾರಕಕ್ಕೇರಿದಾಗ ಪತಿ ಪತ್ನಿಯನ್ನು ಕುತ್ತಿಗೆಗೆ ಹಗ್ಗ ಬಿಗಿದು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ ಹೆಂಡತಿಯ ನಡುವಿನ ಜಗಳದಿಂದಾಗಿ ಗಂಡು ಮಗುವೊಂದು ಅನಾಥವಾಗಿದೆ.
Also Read ಸೆಪ್ಟೆಂಬರ್ 07 ಗುರುವಾರದಂದು ► ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ವಿದ್ಯುತ್ ನಿಲುಗಡೆ