ಕಾರು- ಬಸ್ಸು ಢಿಕ್ಕಿ: ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 24. ಕಾರಿಗೆ ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪ ಅರಾಟೆ ಸೇತುವೆ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಭಟ್ಕಳದ ನಾಜೀರ್ ಎಂದು ಗುರುತಿಸಲಾಗಿದೆ. ನಾಜೀರ್ ರವರು ಕುಟುಂಬದೊಂದಿಗೆ ಮಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷದ ಕಾರಣದಿಂದ ಕಾರನ್ನು ನಿಲ್ಲಿಸಿ ಪರೀಕ್ಷಿಸಿ ಬಳಿಕ ಕಾರಿಗೆ ಹತ್ತುವ ವೇಳೆ ಕುಂದಾಪುರದಿಂದ ಗಂಗೊಳ್ಳಿ ಕಡೆಗೆ ತೆರಳುತ್ತಿ ಬಸ್ ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಜೀರ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರು ನಾಜೀರ್ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Also Read  ಚರಂಡಿ ಹೂಳು ತುಂಬಿ ಕೊಳಚೆ ನೀರಿನ ಹರಿವಿಗೆ ತೊಡಕು➤ಮಾರಕ ರೋಗಗಳ ಉತ್ಪತ್ತಿ ಕೇಂದ್ರವಾಗಿ ಪರಿವರ್ತನೆ

 

error: Content is protected !!
Scroll to Top