ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಭೇಟಿಯಾದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 24. ವಿಶ್ವಸಂಸ್ಥೆಯ ಶೃಂಗಸಭೆ ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿಯಾಗಿದ್ದಾರೆ.

ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ 3ನೇ ಭೇಟಿಯಾಗಿದ್ದು, ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಮಾಡುತ್ತಿರುವ ಭಾರತದ ಪ್ರಯತ್ನಗಳನ್ನು ಝಲೆನ್ಸ್ಕಿ ಶ್ಲಾಘಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ನ್ಯೂಯಾರ್ಕ್‌ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿ‌ರ್ ಝಲೆನ್‌ಸ್ಕಿ ಅವರನ್ನು ಭೇಟಿಯಾಗಿದ್ದೇನೆ. ಉಕ್ರೇನ್‌ ನಲ್ಲಿ ಸಂಘರ್ಷಕ್ಕೆ ಆದಷ್ಟು ಬೇಗನೇ ಪರಿಹಾರ ಕಂಡುಕೊಳ್ಳುವುದು ಮತ್ತು ಶಾಂತಿ ಹಾಗೂ ಸ್ಥಿರತೆಯ ಮರುಸ್ಥಾಪನೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ್ದೇನೆ ಎಂದು ತಿಳಿಸಿದ್ದಾರೆ.

Also Read  ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಕೊಲೆ

 

error: Content is protected !!
Scroll to Top