(ನ್ಯೂಸ್ ಕಡಬ) newskadaba.com ಸೆ. 24. ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಮತ್ತು ಸಿಎಂ ನಡುವಿನ ಕಾನೂನು ಸಮರದಲ್ಲಿ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಹಗರಣಕ್ಕೆ ಸಂಬಂಧಿಸಿ ರಾಜ್ಯಪಾರ ಕ್ರಮವನ್ನು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಎತ್ತಿಹಿಡಿದಿದ್ದು, ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆಯಾಗಿದೆ. ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ಆಗಸ್ಟ್ 17ರಂದು ರಾಜ್ಯಪಾಲರು ಅನುಮತಿ ನೀಡಿದ್ದರು. ಈ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.