ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..!

Death, deadbody, Waterfall

(ನ್ಯೂಸ್ ಕಡಬ) newskadaba.com  ಸೆ. 24. ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆಂದು ತೆರಳಿದ್ದ ಯುವಕನೋರ್ವ ಮೃತಪಟ್ಟ ಘಟನೆ ನಗರದ ಕಂಕನಾಡಿಯ ಬೆಂದೂರುವೆಲ್ನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿರುವ ಕುರಿತು ವರದಿಯಾಗಿದೆ.

ಮೃತಪಟ್ಟವರನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ. ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲೆಂದು “ಫ್ಲೋಂಟ್” ಕ್ಲಿನಿಕ್ ಗೆ ತೆರಳಿದ್ದು, ಅರ್ಧ ಗಂಟೆಯಲ್ಲಿ ಮುಗಿಯಬಹುದಾಗಿದ್ದ ಸಣ್ಣ ಶಸ್ತ್ರಚಿಕಿತ್ಸೆಯು ಸಂಜೆಯಾದರೂ ಮುಗಿಯದೇ ಇದ್ದುದರಿಂದ ಸಂಶಯಗೊಂಡ ಮಾಝಿನ್ ರ ತಾಯಿ ಮತ್ತು ಪತ್ನಿ ವಿಚಾರಿಸಿದಾಗ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿದೆ ಎಂಬ ಉತ್ತರ ಲಭಿಸಿದೆ. ಕೂಡಲೇ ಅಲ್ಲಿಂದ ಕೋಡಿಯಾಲ್ ಬೈಲ್ ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಮಾಝಿನ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ.

Also Read  ಇಂದು ಆತೂರಿನಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನಾ ಸಮಾವೇಶ

error: Content is protected !!
Scroll to Top