ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚಿಸಿದ ಸರ್ಕಾರ

(ನ್ಯೂಸ್ ಕಡಬ) newskadaba.com ಸೆ. 24. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ವರಿಶೀಲಿಸಿ ವರದಿ ನೀಡಲು ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅವರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

Also Read  ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ವತಿಯಿಂದ ಲಕ್ಷದ್ವೀಪದೊಂದಿಗೆ ಐಕ್ಯಮತ ತೋರಿಸಲು ಭಿತ್ತಿಪತ್ರ ಪ್ರದರ್ಶನ

error: Content is protected !!
Scroll to Top