ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ (PUC & Equivalent Course),  ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನ. ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ವೆಬ್‍ಸೈಟ್ ವಿಳಾಸ https://ssp.postmatric.karnataka.gov.in/ ಮೂಲಕ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ https://bcwd.karnataka.gov.in 

Also Read  ಕಡಬ ಪರಿಸರದಲ್ಲಿ ಕಳ್ಳರ ಓಡಾಟ..‼️ ➤ ಈ ಬಗ್ಗೆ ಕಡಬ ಎಸ್ಐ ಹೇಳಿದ್ದೇನು ಗೊತ್ತೇ..⁉️

ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ – 8050770005, ಇಮೇಲ್ bcwdhelpline@gmail.com ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ 1902, ಇಮೇಲ್ ವಿಳಾಸ postmatrichelp@karnataka.gov.in ಸಂಪರ್ಕಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top