(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.09. ಹೆಬ್ಬಲಸು ಮತ್ತು ಮಾವು ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿರುವ ಮಂಗಳೂರು ಅರಣ್ಯ ಸಂಚಾರಿ ದಳದ ಉಪ ವಲಯ ಅರಣ್ಯ ಅಧಿಕಾರಿಗಳು ಟೆಂಪೋ ಸಹಿತ ಮರಗಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಮಂಗಳೂರಿನ ಅರ್ಜುನಕೋಡಿ ರಸ್ತೆಯ ಎಡಪದವು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಟೆಂಪೋವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹೆಬ್ಬಲಸು ಮತ್ತು ಮಾವು ಜಾತಿಯ ಒಟ್ಟು 13 ಮರದ ದಿಮ್ಮಿಗಳನ್ನು ಹಾಗೂ ಸಾಗಾಟಕ್ಕೆ ಬಳಸಲಾದ ಟೆಂಪೋವನ್ನು ಪಡಿಸಿಕೊಳ್ಳಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆನ್ನಲಾಗಿದೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಪ್ರಮೋದ್, ಸೀತಾರಾಮ್ ಕೆ, ಯಶೋಧರ ಕೆ., ರಾಜಶೇಖರ್ ಕ್ಯಾತ್ನಾರ್ ಹಾಗೂ ವಾಹನ ಚಾಲಕ ಜಯ ಪ್ರಕಾಶ್ ಪಾಲ್ಗೊಂಡಿದ್ದರು.