ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸೆಪ್ಟೆಂಬರ್ 26ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ – News Kadaba

ಸೆಪ್ಟೆಂಬರ್ 26ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. 2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ. ಕ. ಜಿಲ್ಲೆ, ಹಾಗೂ ಮಂಗಳೂರು ಮಹಾನಗರ ಪಾಲಿಕೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 26ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಘಟಿಸಲಾದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, ತ್ರೋಬಾಲ್, ಫುಟ್ ಬಾಲ್ ಹಾಗೂ ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಹಾಕಿ, ಬಾಸ್ಕೆಟ್‍ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹ್ಯಾಂಡ್‍ಬಾಲ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್  ಕ್ರೀಡೆಗಳನ್ನು ನೇರವಾಗಿ  ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಲಾಗುವುದರಿಂದ ಈ ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ  ಕ್ರೀಡಾಪಟುಗಳು ನೇರವಾಗಿ ಜಿಲ್ಲಾ ಮಟ್ಟದ ಕ್ರೀಡಾಕೂಟ ದಿನದಂದು ಭಾಗವಹಿಸಬೇಕು. ಟೆನ್ನಿಸ್, ನೆಟ್ ಬಾಲ್ ಮತ್ತು ಈಜು ಕ್ರೀಡೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ನೋಡೆಲ್ ಅಧಿಕಾರಿ ವಿನೋದ್ ಕುಮಾರ್ (ಮೊಬೈಲ್ ಸಂಖ್ಯೆ : 9845026869) ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲೆ, ಮಂಗಳೂರು  (ಕಚೇರಿ, ದೂರವಾಣಿ ಸಂಖ್ಯೆ  0824-2451264) ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top