(ನ್ಯೂಸ್ ಕಡಬ) newskadaba.com ಕುಂದಾಪುರ(ಸೆ.25): ಬೈಂದೂರು ವಲಯ ನಾಡದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟಗಳನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ಹೊರಗೆ ಹಾಕಿದ್ದಾರೆ. ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ. ಬುಲ್‌ಟ್ರಾಲ್ ಲೈಟ್ ಫಿಶಿಂಗ್‌ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೈಂದೂರು ವಲಯ ನಾಡದೋಣಿ ಮೀನುಗಾರರ ಅಧ್ಯಕ್ಷರಾದ ನಾಗೇಶ್ ಖಾರ್ವಿ ಆಗ್ರಹಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತಾಡಿದ ಅವರು, ಮಂಗಳೂರಿನಿಂದ ಕಾರವಾರದ ತನಕ ನಾಡ ದೋಣಿ ಮೀನುಗಾರರು ಸಭೆ ನಡೆಸಿ ಬುಲ್ಟ್ರೋಲ್ ಮೀನುಗಾರಿಕೆ ನಿಷೇಧಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಟ್ರಾಲ್ ಬೋಟ್ ನವರು ಸುಮಾರು 45 ಪೊಸಿಷನ್ 29 ಲಾಂಗ್‌ನಲ್ಲಿ ಬುಲ್ಟ್ರೋಲ್ ಮಾಡುತ್ತಿರುವ ದೃಶ್ಯಗಳು ಕಂಡು ಬಂದ್ದಿದ್ದು, ನಾಡದೋಣಿಯುವರು ಇದನ್ನು ಪ್ರತಿಭಟಿಸಿದ್ದು ಇದನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇರುವುದು ನಾಡ ದೋಣಿಯ ಮೀನುಗಾರರಿಗೆ ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಅವರು ಆರೋಪಿಸಿದ್ದಾರೆ.