(ನ್ಯೂಸ್ ಕಡಬ) newskadaba.com ಸೆ. 25. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಎಂಟಿಆರ್ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ನಡೆದಿದೆ.
ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರನ್ನು ಚಲಾಯಿಸುತ್ತಿದ್ದಾಗ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ವೇಗವಾಗಿ ಕಾರಿನ ಮುಂಭಾಗಕ್ಕೆ ವ್ಯಾಪಿಸಿದೆ. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರಿನ ಬ್ಯಾಟರಿಯಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದ ತಾತ್ಕಾಲಿಕ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕಾರಿನ ಮುಂಭಾಗ ಬೆಂಕಿಗೆ ಆಹುತಿಯಾಗಿದೆ.
Also Read ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ