ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ‘ಯುವ ಸಂಭ್ರಮ’ಕ್ಕೆ ಅದ್ದೂರಿ ಚಾಲನೆ

(ನ್ಯೂಸ್ ಕಡಬ) newskadaba.com ಸೆ. 25. ಯುವಕರ ಸಂಭ್ರಮ ಎಂದೇ ಹೇಳಲಾಗುವ ಯುವ ಸಂಭ್ರಮವು ದಸರಾ ಮಹೋತ್ಸವದ ಮೊದಲ ಅದ್ದೂರಿ ಕಾರ್ಯಕ್ರಮವಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.


ಅವರು ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಯುವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿ, ಯುವಸಂಭ್ರಮದಲ್ಲಿ ಭಾಗವಹಿಸಬೇಕೆಂದು ರಾಜ್ಯದ 470 ಕಾಲೇಜುಗಳಿಂದ ಯುವ ಪ್ರತಿಭೆಗಳು ಅರ್ಜಿ ಸಲ್ಲಿಸಿದ್ದು, 150 ಕಾಲೇಜುಗಳು ಆಯ್ಕೆಯಾಗಿ 120 ಕಾಲೇಜುಗಳನ್ನು ಕೈ ಬಿಡಲಾಗಿತ್ತು. ಯುವ ಸಂಭ್ರಮವನ್ನು ಒಂದು ದಿನ ಹೆಚ್ಚು ಮಾಡಿ ಅವರಿಗೂ ಅವಕಾಶ ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.

Also Read  ಕಡಬ: ತಾಯಿ ಹಾಗೂ ಮಗಳ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಆರೋಪಿಯ ಜಾಮೀನು ರದ್ದುಪಡಿಸಿದ ಹೈಕೋರ್ಟ್...! ? ಆರೋಪಿಯನ್ನು ಮರಳಿ ಜೈಲಿಗೆ ಕಳುಹಿಸುವಂತೆ ಕಡಬ ಪೊಲೀಸರಿಗೆ ಆದೇಶ

 

error: Content is protected !!
Scroll to Top