ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

 (ನ್ಯೂಸ್ ಕಡಬ) newskadaba.com ಮಂಗಳೂರು(ಸೆ.25): ಕರಾವಳಿಯ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ.

2019ರ ಮೇ 11ರಂದು ಮಂಗಳೂರು ನಗರದ ವೆಲೆನ್ಸಿಯಾದ ಸೂಟರ್ ಪೇಟೆಯಲ್ಲಿ ಶ್ರೀಮತಿ ಶೆಟ್ಟಿ ಕೊಲೆ ನಡೆದಿತ್ತು. ಮನೆಗೆ ಬಂದು ಚಿಟ್ ಫಂಡ್ ಹಣ ಕೇಳಿದ್ದ ಮಹಿಳೆಯನ್ನು ಜೋನ್ ಸ್ಯಾಮ್ಸನ್ ದೊಣ್ಣೆಯಿಂದ ಹೊಡೆದು ಕೊಂದಿದ್ದ. ಬಳಿಕ ಶ್ರೀಮತಿ ಶೆಟ್ಟಿ ಅವರನ್ನು 29 ತುಂಡುಗಳಾಗಿ ಕತ್ತರಿಸಿ ನಗರದ ವಿವಿದೆಡೆ ಎಸೆಯಲಾಗಿತ್ತು.

Also Read  ಯುವತಿಯ ಮೇಲೆ ಅತ್ಯಾಚಾರ ಪ್ರಕರಣ ➤ ಸಬ್ ಇನ್ ಸ್ಪೆಕ್ಟರ್ ಅಮಾನತು…!

ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಜೋನಸ್ ಸ್ಯಾಮ್ಸನ್ ಮತ್ತು ಪತ್ನಿ ವಿಕ್ಟೀರಿಯಾ ಅವರ ಆರೋಪ ಸಾಬೀತಾಗಿತ್ತು. ಇದೀಗ ಆರೋಪಿ ದಂಪತಿಗೆ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರು. ದಂಡ ವಿಧಿಸಿದ್ದಾರೆ. ಕೊಲೆಗೆ ಸಹಕರಿಸಿದ್ದ ಮೂರನೇ ಆರೋಪಿ ರಾಜುಗೆ ಆರುವರೆ ತಿಂಗಳು ಸಾದಾ ಸಜೆ ಮತ್ತು 5000 ರು. ದಂಡ ವಿಧಿಸಲಾಗಿದೆ. ಈಗಾಗಲೇ ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಿರುವ ರಾಜು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

error: Content is protected !!
Scroll to Top