(ನ್ಯೂಸ್ ಕಡಬ) newskadaba.com ಸೆ. 25. ಡಿಸೆಂಬರ್ 3ರಂದು ನಡೆಯಲಿರುವ “ವಿಶ್ವ ವಿಕಲಚೇತನರ ದಿನಾಚರಣೆ”ಯಂದು ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ/ ಸಂಸ್ಥೆಗಳಿಗೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಸಂಬಂಧಿಸಿದ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಂಗಳೂರು ಅಥವಾ ಇಲಾಖೆಯ ವೆಬ್‍ಸೈಟ್ www.dwdsc.kar.nic.in ನಲ್ಲಿ ಪಡೆಯಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನ. ಅರ್ಜಿಗಳನ್ನು ವಿವರಗಳೊಂದಿಗೆ ದ್ವಿಪ್ರತಿಯಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ವಾರ, ಮಂಗಳೂರು ಇವರ ಕಛೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2458173 ಅಥವಾ 0824-2455999 ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.