ಕಾರಾಗೃಹದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸೆ. 25. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ವಿಶ್ವ ಸಾಕ್ಷರತಾ ದಿನಾಚರಣೆ ಅಂಗವಾಗಿ ಕಾರಾಗೃಹದೊಳಗಿನ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ‘ಒಬ್ಬರು ಒಬ್ಬರಿಗೆ ಕಲಿಸಿ’ ಎಂಬ ಕಾರ್ಯಕ್ರಮವು ನಗರದ ಜಿಲ್ಲಾ ಕಾರಾಗೃಹದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಾಕ್ಷರತಾ ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ಹಿರಿಯ ಸಾಹಿತಿ ಇರಾ  ನೇಮು ಪೂಜಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,  ಅನಕ್ಷರತೆ ಎಂಬುದು ಚಂದ್ರ ತಾರೆಗಳಿಲ್ಲದ ಕತ್ತಲೆಯ ಬಾನು, ದೇಶದ ಅಭಿವೃದ್ಧಿಗೆ ಅನಕ್ಷರತೆ ಮಾರಕ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರಾಗೃಹದ ಅಧೀಕ್ಷಕ  ಓಬಳೇಶಪ್ಪ ಮಾತನಾಡಿ ಎಲ್ಲರೂ ವಿದ್ಯಾವಂತರಾಗಲು ಇಂತಹ ಕಾರ್ಯಕ್ರಮಗಳು ಅಗತ್ಯ ಎಂದು ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‍ ಅಧ್ಯಕ್ಷ  ಹರೀಶ ಸುಲಾಯ ಒಡ್ಡಂಬೆಟ್ಟು ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್‍ ಅಧ್ಯಕ್ಷರಾದ ಗೋಪಾಲಕೃಷ್ಣ ಶಾಸ್ತ್ರಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಕಲಿಕಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

error: Content is protected !!
Scroll to Top