ರಾಜ್ಯದ ಮೊದಲ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಯಲಹಂಕ ಯೋಜನಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಜ್ಯದ ಮೊದಲ ನೈಸರ್ಗಿಕ ಅನಿಲ ಆಧಾರಿತ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳವಾರ ಲೋಕಾರ್ಪಣೆಗೊಳಿಸಿದರು.

ವಿದ್ಯುತ್ ಸ್ಥಾವರನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಸ್ಥಾವರ ಉದ್ಘಾಟನೆ ಮೂಲಕ ಭವಿಷ್ಯದ ಬೇಡಿಕೆಗೆ ಅಗತ್ಯ ವಿದ್ಯುತ್ ಉತ್ಪಾದನೆಯತ್ತ ಮಹತ್ವದ ಹೆಜ್ಜೆ ಇಟ್ಟಿದ್ದೇವೆ ಎಂದು ಹೇಳಿದರು. ಇದೇ ವೇಳೆ ರಾಜ್ಯ ವಿದ್ಯುತ್ ಸ್ವತಂತ್ರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Also Read  ಕ್ಷುಲ್ಲಕ ಕಾರಣಕ್ಕೆ ಏಜೆಂಟ್ ಹಾಗೂ ಬಸ್ ಚಾಲಕನ ನಡುವೆ ಹೊಡೆದಾಟ

 

error: Content is protected !!
Scroll to Top