ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ- ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 25. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ನ್ಯಾಯಾಲಯದ ಕಲಾಪದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರ ವಿರುದ್ಧದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ.


ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು, ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ. ಇದು ಮೂಲಭೂತವಾಗಿ ರಾಷ್ಟ್ರದ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ ಎಂದು ಹೇಳಿದೆ.

Also Read  ಆಫ್ರಿಕಾದಲ್ಲಿ ಸಿರಪ್ ಸೇವಿಸಿದ 66 ಮಕ್ಕಳು ಮೃತ್ಯು ➤‌ ಭಾರತೀಯ ಔಷಧ ಕಂಪನಿ ವಿರುದ್ದ ತನಿಖೆ

 

 

error: Content is protected !!
Scroll to Top