ದಬ್ಬಾಳಿಕೆ ಮುಂದುವರೆದರೆ ಪೊಲೀಸ್ ಠಾಣೆಗೆ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.25) : “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಪದೇಪದೇ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಪೊಲೀಸ್ ಅಧಿಕಾರಿಗಳು ಇದೇರೀತಿ ದೌಲತ್ತಿನಿಂದ ನಡೆದುಕೊಂಡರೆ ನನ್ನನ್ನೂ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಕೆ ನೀಡಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪೊಲೀಸರು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ವಿನಾಕಾರಣ ಎಫ್‍ಐಆರ್ ದಾಖಲಿಸುತ್ತಿದ್ದಾರೆ. ಆಡಳಿತ ಪಕ್ಷಕ್ಕೆ ಖುಷಿಪಡಿಸಲು ಅಧಿಕಾರಿಗಳ ಈ ನಡವಳಿಕೆ ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು.ಮುಖ್ಯಮಂತ್ರಿಗಳು ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. ರಾಜ್ಯದ ಜನರ ಅಭಿಪ್ರಾಯಕ್ಕೆ ನೀವು ಮನ್ನಣೆ ನೀಡಬೇಕು. ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ತಮ್ಮ ಕುಟುಂಬಕ್ಕೆ ನೀಡಿದ್ದು, ಇದರಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತಮ್ಮ ಭಂಡತನ ಬದಿಗಿಟ್ಟು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

Also Read  ಉಡುಪಿ: ಮೂವರು ಶಂಕಿತರಲ್ಲೂ ಕೊರೋನ ಇಲ್ಲ

error: Content is protected !!
Scroll to Top