62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಅಬಕಾರಿ ಪರವಾನಗಿ ವಿತರಣೆ, ನವೀಕರಣದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಗರದ 62 ಅಬಕಾರಿ ವಿಭಾಗ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಹಲವು ಕಚೇರಿಗಳಲ್ಲಿ ಗಾಂಜಾ, ಮದ್ಯದ ಬಾಟಲಿಗಳು ಹಾಗೂ ದಾಖಲೆ ಇಲ್ಲದ ರೂ.2 ಲಕ್ಷ ರೂ. ಪತ್ತೆಯಾಗಿದೆ.

ಸಾರ್ವಜನಿಕರ ದೂರುಗಳ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡಗಳನ್ನು ರಚಿಸಲಾಗಿತ್ತು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಹಲವು ಲೋಪದೋಷಗಳ ಕಂಡು ಬಂದಿದ್ದು, ತನಿಖೆಗೆ ಆದೇಶಿಸಿದ್ದಾರೆಂದು ತಿಳಿದುಬಂದಿದೆ.

Also Read  ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ - ವಿಡಿಯೋ ವೈರಲ್..!

 

error: Content is protected !!
Scroll to Top