ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಸೆ. 25. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರದಂದು ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿರುವುದಾಗಿ ತಿಳಿದುಬಂದಿದೆ.


ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಂಕಷ್ಟ ಎದುರಾಗಿದೆ.

error: Content is protected !!

Join the Group

Join WhatsApp Group