(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ.09. ಇಲ್ಲಿನ ಚಾರ್ಮಾಡಿ ಸಮೀಪದ ಪಣಕ್ಕಜೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಚಲಿಸುತ್ತಿದ್ದ ಟ್ಯಾಂಕರ್ ನಿಂದ ಏಕಾಏಕಿ ಗ್ಯಾಸ್ ಸೋರಿಕೆಯಾಗಲು ಆರಂಭಿಸಿದ್ದರಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಶಿರಾಡಿ ಘಾಟ್ ದುರಸ್ತಿಯ ಹಿನ್ನಲೆಯಲ್ಲಿ ಹೆಚ್ಚಿನ ವಾಹನಗಳು ಚಾರ್ಮಾಡಿ ಮೂಲಕವೇ ಮಂಗಳೂರು ಬೆಂಗಳೂರಿಗೆ ಸಂಚರಿಸುತ್ತಿದ್ದವು. ಈ ಸಂದರ್ಭದಲ್ಲಿ ಟ್ಯಾಂಕರ್ ನ ಮೇಲ್ಭಾಗದಿಂದ ಗ್ಯಾಸ್ ಸೋರಿಕೆಯಾಗಲು ಆರಂಭಿಸಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಅಗ್ನಿ ಶಾಮಕದಳದ ಅಧಿಕಾರಿಗಳು ದೌಡಾಯಿಸಿ ನೀರು ಹಾರಿಸಿ ಅಗ್ನಿ ಅವಘಡವಾಗದಂತೆ ಮುಂಜಾಗ್ರತೆ ವಹಿಸುತ್ತಿದ್ದಾರೆ. ಮುನ್ನೆಚ್ಚರಿಕೆಯ ಕ್ರಮವಾಗಿ ಸಂಚಾರವನ್ನು ತಡೆ ಹಿಡಿಯಲಾಗಿದ್ದು, ಇದರಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೆ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕವನ್ನೂ ಕಡಿತಗೊಳಿಸಲಾಗಿದ್ದು, ಬೆಂಕಿ ಉರಿಸದಂತೆ ಎಚ್ಚರಿಕೆ ವಹಿಸಲಾಗಿದೆ.