ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ(ಸೆ.25) : ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಸುಳ್ಯ ಪೊಲೀಸರ ವಿರುದ್ಧ ಹಾಗೂ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಅನ್ಯಧರ್ಮದ ಯುವಕನ ನಡೆ ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ಬೃಹತ್‌ ಪ್ರತಿಭಟನೆ ಸುಳ್ಯ ಠಾಣಾ ಬಳಿಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ನಡೆಯಿತು. ಪ್ರತಿಭಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ತಪ್ಪು ಮಾಡಿದವರ ಮೇಲೆ ಕ್ರಮ ಕೈ ಗೊಳ್ಳಲಿ. ಪೊಲೀಸರು ಎಲ್ಲರಿಗೂ ನ್ಯಾಯ ನೀಡುವ ಕೆಲಸ ಮಾಡಬೇಕು. ತಪ್ಪು ಮಾಡಿರುವ ಪೊಲೀಸ್‌ ಸಿಬ್ಬಂದಿಯನ್ನು ವರ್ಗಾಯಿಸಬೇಕು ಎಂದರು.

ಬಿಜೆಪಿ ಮುಖಂಡ ಎ. ವಿ. ತೀರ್ಥರಾಮ ಮಾತನಾಡಿ, ಯಾವುದೇ ಗಲಾ ಟೆಗೆ ಪೊಲೀಸರು ಆಸ್ಪದ ನೀಡಬಾರದು. ನಾವು ನ್ಯಾಯಕ್ಕಾಗಿ ಪ್ರತಿಭಟಿಸುತ್ತಿದ್ದೇವೆ. ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನನ್ನು ಆರೆಸ್ಟ್‌ ಮಾಡಬೇಕೆಂದು ಒತ್ತಾಯಿಸಿದರು.

Scroll to Top