ಆ್ಯಂಬುಲೆನ್ಸ್ ಪಲ್ಟಿ: ರೋಗಿ ಮೃತ್ಯು..!



(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 26. ಪುತ್ತೂರಿನಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆ ತರುತ್ತಿದ್ದ ಆ್ಯಂಬುಲೆನ್ಸ್ ಪಡೀಲು ಸಮೀಪ ಪಲ್ಟಿಯಾಗಿ ಗಂಭೀರ ಗಾಯಗೊಂಡ ರೋಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ವರದಿಯಾಗಿದೆ.








ಮೃತರನ್ನು ಕಡಬ ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ (73) ಎಂದು ಗುರುತಿಸಲಾಗಿದೆ. ದಾಸಪ್ಪ ರೈ ಅವರ ಪತ್ನಿ ನಳಿನಿ ರೈ (54), ಪುತ್ರ ಹರ್ಷಿತ್ (33) ಹಾಗೂ ಸಂಬಂಧಿಕ ಯುವಕ ಮನೀಷ್ (24) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆ.24ರಂದು ತಡರಾತ್ರಿ 1:30ರ ವೇಳೆಗೆ ಸ್ಟ್ರೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡಿತ್ತು. ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾಸಪ್ಪ ರೈ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಆ್ಯಂಬುಲೆನ್ಸ್ ನಲ್ಲಿ ಕರೆದೊಯ್ಯಲಾಗಿತ್ತು. ಮುಂಜಾನೆ 4 ಗಂಟೆ ವೇಳೆಗೆ ಆ್ಯಂಬುಲೆನ್ಸ್ ಫಸ್ಟ್ ನ್ಯೂರೋ ಆಸ್ಪತ್ರೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯುತ್ ಕಂಬವೊಂದಕ್ಕೆ ಢಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.






 

error: Content is protected !!
Scroll to Top