ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 26. ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Also Read  ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು

 

error: Content is protected !!
Scroll to Top