ನಾಳೆ (ಸೆ.27) ಪಾಲಿಟೆಕ್ನಿಕ್ ಸಮ್ಮೇಳನ

(ನ್ಯೂಸ್ ಕಡಬ) newskadaba.com ಸೆ. 25. ISTE, ನವದೆಹಲಿ ಮತ್ತು ISTE ಕರ್ನಾಟಕ ಶಾಖೆ ಇವರ ಸಹಯೋಗದೊಂದಿಗೆ ಸೆಪ್ಟೆಂಬರ್ 27ರಂದು “4th ISTE State Level Student Convention for Polytechnics 2024” ಎಂಬ ಒಂದು ದಿನದ ರಾಜ್ಯ ಮಟ್ಟದ ಸಮ್ಮೇಳನವು ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಸಮ್ಮೇಳನಕ್ಕೆ ISTE ಕಾರ್ಯಕಾರಿ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಆಗಮಿಸುತ್ತಿದ್ದು, ರಾಜ್ಯದ ಸರ್ಕಾರಿ/ ಅನುದಾನಿತ/ ಅನುದಾನರಹಿತ ಪಾಲಿಟೆಕ್ನಿಕ್ ಗಳ  ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಲಿರುವರು ಎಂದು ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group