ಯುವ ದಸರಾ 2024: ಮೈಸೂರಿನಲ್ಲಿ ಸಂಗೀತ ಕ್ಷೇತ್ರದ ದಿಗ್ಗಜ ಕಲಾವಿದರಿಂದ ಸಂಗೀತ ಸುಧೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 26. ಈ ವರ್ಷ ಮರೆಯಲಾಗದ ಯುವ ದಸರಾಕ್ಕೆ ಮೈಸೂರು ಸಜ್ಜಾಗಿದ್ದು, ಸಂಗೀತ ರಸಸಂಜೆಯಲ್ಲಿ ಸಂಗೀತ ಕ್ಷೇತ್ರದ ದಿಗ್ಗಜ ಕಲಾವಿದರಾದ ಇಳಿಯರಾಜ, ಎ.ಆರ್.ರೆಹಮಾನ್ ಮತ್ತು ಶ್ರೇಯಾ ಘೋಷಾಲ್ ಸೇರಿದಂತೆ ಹಲವರು ಸಂಗೀತ ಸುಧೆ ಹರಿಸಲಿದ್ದಾರೆ.

ಯುವ ದಸರಾ ಸಮಿತಿಯಿಂದ ಅ.6ರಿಂದ 10ರವರೆಗೆ ಯುವ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.6ರಂದು ಅಶ್ವಿನಿ ಪುನೀತ್ ರಾಜ್‌ಕುಮರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಾಲ್ಕು ದಿನಗಳ ಕಾಲ ಸಂಜೆ 6ರಿಂದ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.

Also Read  ನಡುರಸ್ತೆಯಲ್ಲಿ ಉರುಳಿ ಬಿದ್ದ ಮರ 3 ಕಾರುಗಳು ಜಖಂ– ಇಬ್ಬರಿಗೆ ಗಾಯ

error: Content is protected !!
Scroll to Top