ಗೌರವ ಉಳಿಯಬೇಕಾದರೆ ಕೂಡಲೇ ರಾಜೀನಾಮೆ ನೀಡಿ- ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಸೆ. 26. ತಮಗಿರುವ ಗೌರವ ಉಳಿಯಬೇಕೆಂದರೆ ಸಿಎಂ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜಕಾರಣದಲ್ಲಿ ಅವರದ್ದೇ ಆದ ಗುರುತಿದೆ. ತಮ್ಮದೇ ಜನಾಭಿಪ್ರಾಯ ಇದೆ. ಅದನ್ನು ಉಳಿಸಿಕೊಂಡು ಹೋಗಬೇಕಾದರೆ ಅವರು ನೈತಿಕತೆಯನ್ನು ಮೆರೆಯಬೇಕು. ಎಲ್ಲರಂತೆ ಉದಾಹರಣೆ ಕೊಟ್ಟರೆ ಇವರೂ ಅವರ ಸಾಲಿಗೆ ಸೇರುತ್ತಾರೆ ಎಂದರು.

Scroll to Top