ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಅಜೆಕಾರು, ಸೆ. 26. ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಹೋಗಿದ್ದವರನ್ನು ವಂಚಿಸಿ ಅವರ ಕಾರ್ಡ್‌ ಬಳಸಿಕೊಂಡು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಅಜೆಕಾರು ಪೊಲೀಸರು ಮರ್ಣೆ ಗ್ರಾಮದ ಕಾಡುಹೊಳೆ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಸೆ. 24ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರದ ಶ್ರವಣ್‌ ಸತೀಶ ಮಿನಜಗಿ (27), ಪ್ರದೀಪ ಮಾರುತಿ ಇಂಗ್ಲೆ (27) ಹಾಗೂ ಕಿರಣ್‌ ಬಾಲು ಚೌಹಾಣ್‌ (28) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಇವರ ವಿರುದ್ಧ ಈ ತನಕ ಇದೇ ರೀತಿಯ ಸುಮಾರು 70ಕ್ಕೂ ಹೆಚ್ಚು ಪ್ರಕರಣ ದಾಖಲಾಗಿರುವುದು ಹಾಗೂ ಹಲವು ಪ್ರಕರಣದಲ್ಲಿ ಜೈಲು ಶಿಕ್ಷೆ ಆಗಿರುವುದು ಪ್ರಾಥಮಿಕ ತನಿಖೆ ಯಿಂದ ತಿಳಿದುಬಂದಿದೆ.

Also Read  ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!   ➤ ದೂರು ದಾಖಲು

error: Content is protected !!
Scroll to Top