(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 26. ಕರ್ನಾಟಕ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕುಸ್ಮಾ) ಬೆಂಗಳೂರು, ವಿವೇಕಾನಂದ ವಿದ್ಯಾನಿಕೇತನ ಶಾಲೆಗೆ “ಕುಸ್ಮಾ ಸ್ಕೂಲ್ ಮ್ಯಾನೇಜ್ಮೆಂಟ್ ಎಕ್ಸಲೆನ್ಸ್ ಅವಾರ್ಡ್” ನೀಡಿ ಗೌರವಿಸಿದೆ.
ಶಾಲೆಯ ಮುಖ್ಯೋಪಾಧ್ಯಾಯನಿ ಅಂಬಿಕಾ ರೆಡ್ಡಿ ಕುಸುಮ ಪುರಸ್ಕಾರವನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಸುವರ್ಣ ಭಗವತಿ ಅವರಿಗೆ ಹಸ್ತಾಂತರಿಸಿ ಅಭಿನಂದಿಸಿದರು. ಇನ್ನೂ ಹೆಚ್ಚಿನ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮಿಸಬೇಕು ಎಂದು ಸುವರ್ಣ ಭಗವತಿ ಹೇಳಿದರು. ಶಾಲೆಗೆ ಈ ಪುರಸ್ಕಾರ ಬಂದಿರುವುದಕ್ಕೆ ಶಾಲಾ ಸಿಬ್ಬಂದಿ ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.