ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು ಸಾಧ್ಯತೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) : ಮುಡಾ ಹಗರಣದಲ್ಲಿ ಲೋಕಾಯುಕ್ತ ಸುಳಿಗೆಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ದಿನ ದಿನಕ್ಕೂ ಆತಂಕ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹಿನ್ನೆಲೆ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆಯ ನಂತರ ಲೋಕಾಯುಕ್ತ ಮೈಸೂರು ಎಸ್‌ಪಿ ಉದೇಶ್ ಅವ್ರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ.

ಇಂದು ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ. ಎಫ್​ಐಆರ್​​ನಲ್ಲಿ ಸಿಎಂ ಸಿದ್ದರಾಮಯ್ಯ A1 ಆಗುವ ಸಾಧ್ಯತೆ ಇದೆ.

 

error: Content is protected !!

Join WhatsApp Group

WhatsApp Share