ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ

 (ನ್ಯೂಸ್ ಕಡಬ) newskadaba.com ಪುತ್ತೂರು(ಸೆ.27) :  ಪುತ್ತೂರು ಕೋರ್ಟ್‌ ರೋಡ್‌ನ‌ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದ ರಿಲೇಷನ್‌ಶಿಪ್‌ ಮ್ಯಾನೇಜರ್‌ ಚೈತನ್ಯ ಎಚ್‌.ಸಿ. ಅವರು ನೀಡಿದ ದೂರಿನಂತೆ ಅಖಿಲೇಶ್ ಮತ್ತು ಕೃಷ್ಣ ಕಿಶೋರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬೊಳುವಾರು ಬಳಿ ತಿರುಮಲ ಹೋಂಡಾ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಉಜಿರ್ಪಾದೆ ನಿವಾಸಿ ಕೀರ್ತಿ ಎನ್ನುವವರು ಅಖಿಲೇಶ್ ಹೆಸರಿನಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ 2 ಕೋಟಿ ರೂ. ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡದೇ ಎನ್‌ಪಿಎ ಆಗಿತ್ತು. ಸಾಲ ಬಾಕಿಯ ಬಗ್ಗೆ ಹಲವಾರು ಬಾರಿ ವಕೀಲರ ಮುಖಾಂತರ ಲೀಗಲ್‌ ನೋಟಿಸ್‌ ಮಾಡಿ, ತಿಳಿಸಿ ಹೇಳಿದ್ದರೂ ಸಾಲ ಮರುಪಾವತಿ ಮಾಡಿರಲಿಲ್ಲ.

Also Read  ದೇಶದಲ್ಲಿ ಕೊರೋನ ವೈರಸ್‌ಗೆ 199 ಮಂದಿ ಬಲಿ: 6,500 ಗಡಿಯತ್ತ ಸೋಂಕಿತರ ಸಂಖ್ಯೆ

ಈ ಬಗ್ಗೆ ಮೇಲಾಧಿಕಾರಿಗಳ ಮೌಖಿಕ ಆದೇಶದಂತೆ ಬ್ಯಾಂಕ್‌ ಸಿಬ್ಬಂದಿ ಅವರು ಅಖಿಲೇಶ್ ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಅಖೀಲೇಶ್‌ ಅವರು ಮನೆಯಲ್ಲಿರಲಿಲ್ಲ. ಅಖಿಲೇಶ್ ಅವರು ಮನೆಗೆ ಬಂದು ಬ್ಯಾಂಕ್‌ ಸಿಬಂದಿ ಜತೆಗೆ ಮನೆಗೆ ಬಂದಿರುವ ಬಗ್ಗೆ ತಕರಾರು ತೆಗೆದು ಗದರಿಸಿರುವುದು ಮಾತ್ರವಲ್ಲದೇ, ತಂದೆ ಬರುವ ತನಕ ಕೂರುವಂತೆ ಮನೆಯ ಬಾಗಿಲು ಬಂದ್‌ ಮಾಡಿ ಬಲವಂತವಾಗಿ ಕೂರಿಸಿದ್ದಾರೆ. ದೂರುದಾರರಲ್ಲಿ ಮನೆಗೆ ಬಂದ ಬಗ್ಗೆ ತಕರಾರು ತೆಗೆದು, ಗದರಿಸಿ ಪಿಸ್ತೂಲ್‌ ತೋರಿಸಿ ಶೂಟ್‌ ಮಾಡುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಗುರುವಾರ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top