ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಸಾಧ್ಯತೆ

(ನ್ಯೂಸ್ ಕಡಬ) newskadaba.com ಸೆ. 27. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯರವರಿಗೆ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆ, ಸಿಎಂ ವಿರುದ್ದ ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಲೋಕಾಯುಕ್ತ ಐಜಿಪಿ, ಎಡಿಜಿಪಿ ಹಾಗೂ ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರದಂದು ಸಿಎಂ ವಿರುದ್ಧದ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಲೋಕಾಯುಕ್ತ ಮೈಸೂರು ಎಸ್‌ಪಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ. ಇಂದು ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಾಗುವ ಸಾಧ್ಯತೆಯಿದ್ದು, ಎಫ್​ಐಆರ್​​ನಲ್ಲಿ ಸಿಎಂ ಸಿದ್ದರಾಮಯ್ಯ A1 ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Also Read  ಸುಳ್ಯ - ಮಡಿಕೇರಿ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ನಿಷೇಧ ► ಮೂರು ದಿನಗಳ ಹಿಂದಷ್ಟೇ ಸಂಚಾರಕ್ಕೆ ಅವಕಾಶ ನೀಡಲಾಗಿದ್ದ ಸಂಪಾಜೆ ಘಾಟ್ ರಸ್ತೆ

 

error: Content is protected !!
Scroll to Top