ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ

(ನ್ಯೂಸ್ ಕಡಬ) newskadaba.com ಸೆ. 27. ಬಾಂಗ್ಲಾದೇಶದ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ನೇ ಟೆಸ್ಟ್ ಪಂದ್ಯಕ್ಕೂ ಮುಂಚಿತವಾಗಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಕಾನ್ಪುರದಲ್ಲಿ ಶುಕ್ರವಾರ ಆರಂಭವಾಗಲಿರುವ ಭಾರತ – ಬಾಂಗ್ಲಾದೇಶ 2 ನೇ ಟೆಸ್ಟ್‌ನ ಮುನ್ನಾದಿನವಾದ ಗುರುವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ 37 ವರ್ಷದ ಶಕೀಬ್ ಆಘಾತಕಾರಿ ನಿರ್ಧಾರವನ್ನು ತಿಳಿಸಿದ್ದಾರೆ. ಈ ಸರಣಿಯಲ್ಲಿ ಮೀರತ್​ನಲ್ಲಿ ಒಂದು ಪಂದ್ಯ ಜರುಗಲಿದ್ದು, ಈ ಮ್ಯಾಚ್ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಗುಡ್ ಬೈ ಹೇಳಲು ಶಕೀಬ್ ಅಲ್ ಹಸನ್ ನಿರ್ಧರಿಸಿದ್ದಾರೆ. ಇದಾಗ್ಯೂ 2025ರಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದ್ದಾರೆ.

Also Read  ಕೇರಳ ಮಾಜಿ ರಣಜಿ ಕ್ರಿಕೆಟಿಗ ಸಾವು ➤ ಮಗ ಅಶ್ವಿನ್ ಬಂಧನ..!

 

error: Content is protected !!
Scroll to Top