(ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) ರಾಜ್ಯಪಾಲರು ಅಥವಾ ರಾಜ್ಯಪಾಲರ ಸಚಿವಾಲಯವು ಸರ್ಕಾರದಿಂದ ವಿವರಣೆ, ವರದಿ ಸೇರಿದಂತೆ ಯಾವುದೇ ಮಾಹಿತಿ ಕೇಳಿದರೂ ಅಧಿಕಾರಿಗಳು ನೇರವಾಗಿ ನೀಡುವಂತಿಲ್ಲ. ಸಚಿವ ಸಂಪುಟ ಸಭೆಯು ಪರಿಶೀಲಿಸಿ ಅನುಮತಿಸಿದ ಮಾಹಿತಿಯನ್ನು ಮಾತ್ರ ರಾಜ್ಯಪಾಲರಿಗೆ ನೀಡಬೇಕು’ ಎಂದು ಸಚಿವ ಸಂಪುಟ ಸಭೆ ನಿರ್ಧಾರ ಮಾಡಿದೆ. ತನ್ಮೂಲಕ ತಕ್ಷಣದಿಂದ ಜಾರಿಯಾಗುವಂತೆ ಯಾವುದೇ ಮಾಹಿತಿಯನ್ನೂ ಸಚಿವ ಸಂಪುಟ ಸಭೆ ಮುಂದೆ ಮಂಡಿಸದೆ ನೇರವಾಗಿ ರಾಜ್ಯ ಪಾಲರಿಗೆ ನೀಡುವಂತಿಲ್ಲ. ಈವರೆಗೆ ರಾಜ್ಯಪಾಲರು ಬರೆದಿರುವ ಪತ್ರಗಳಿಗೂ ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಿ ಸಭೆ ಅನುಮತಿಸಿದರೆ ಮಾತ್ರ ಮಾಹಿತಿ ಅಥವಾ ವಿವರಣೆ ನೀಡಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಈ ಮೂಲಕ ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ನಡೆಯುತ್ತಿದ್ದ ಗುದ್ದಾಟ ಮತ್ತೊಂದು ಹಂತಕ್ಕೆ ತಲುಪಿದೆ.