ಎಸ್ಸಿ/ಎಸ್ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 27. ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು – www.sw.kar.nic.in ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು – www.twd.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಹತೆಗಳು- ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷ ಒಳಗಿರಬೇಕು. ವಿದ್ಯಾರ್ಥಿ ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರಬೇಕು.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ದಾಖಲೆಗಳು: ಹೊಸ ವಿದ್ಯಾರ್ಥಿಗಳು ಖಾತೆಯನ್ನು ಸೃಷ್ಟಿಸಿ ಅರ್ಜಿ ಸಲ್ಲಿಸಬೇಕು ಹಾಗೂ ನವೀಕರಣ ವಿದ್ಯಾರ್ಥಿಗಳು ವಿದ್ಯಾರ್ಥಿ ಲಾಗಿನ್‍ ನಲ್ಲಿ ಹಳೆಯ ನೋಂದಣಿ ಸಂಖ್ಯೆ ಹಾಗೂ ಪಾಸ್‍ವರ್ಡ್ ಬಳಸಿಕೊಂಡು ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳ/ ಪೋಷಕರ ಆಧಾರ್ ಸಂಖ್ಯೆ ಮತ್ತು ಆಧಾರ್‍ನಲ್ಲಿರುವಂತೆ ಹೆಸರು, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ, ಎಸ್‍ಎಸ್‍ಎಲ್‍ಸಿ ನೋಂದಣಿ ಸಂಖ್ಯೆ,  ಹೆಸರಿನಲ್ಲಿರುವ ಜಾತಿ/ಆದಾಯ ಪ್ರಮಾಣದ ಪತ್ರದ ಆರ್‍ಡಿ ಸಂಖ್ಯೆ, ವಿದ್ಯಾರ್ಥಿಯು ವಿಕಲ ಚೇತನರಾಗಿದ್ದಲ್ಲಿ (ಯು.ಡಿ.ಐ.ಡಿ  ಗುರುತಿನ ಚೀಟಿ), ವಿದ್ಯಾರ್ಥಿಯ ಕಾಲೇಜು ದಾಖಲಾತಿ/ನೊಂದಣಿ ಸಂಖ್ಯೆ, ಸಂಬಂಧಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ(ಅನ್ವಯವಾದಲ್ಲಿ) ಹಾಗೂ ಹಾಸ್ಟೆಲ್ ವಿವರಗಳು(ಅನ್ವಯವಾದಲ್ಲಿ) ವಿದ್ಯಾರ್ಥಿಯು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಕುಟುಂಬ ತಂತ್ರಾಂಶದಲ್ಲಿ ನೋಂದಣಿಯಾಗಿ ಕುಟುಂಬ ಗುರುತಿನ ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group