ಎಸ್ಸಿ/ಎಸ್ಟಿ ಫ್ರೀ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 27. ಪರಿಶಿಷ್ಟಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು – www.sw.kar.nic.in ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು – www.twd.karnataka.gov.in iಟಿ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಹತೆಗಳು- ಮಾನ್ಯತೆ ಪಡೆದ ಮೆಟ್ರಿಕ್ ಪೂರ್ವ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.6 ಲಕ್ಷ ಹಾಗೂ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ವರಮಾನ  ರೂ.2.50 ಲಕ್ಷ ಇರಬೇಕು.

Also Read  ಕಡಬ: ಕಾರು-ಆ್ಯಕ್ಟಿವಾ ನಡುವೆ ಢಿಕ್ಕಿ ➤ ಕಾರು ಚಾಲಕ ಗಂಭೀರ

ಅರ್ಜಿ ಸಲ್ಲಿಸುವ ವಿಧಾನ ಹಾಗೂ ದಾಖಲೆಗಳು- ಹೊಸ ವಿದ್ಯಾರ್ಥಿಗಳು ಖಾತೆಯನ್ನು ಸೃಜಿಸಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳ ಆರ್‍ಡಿ ನಂಬರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾಥಿಗಳ ಆಧಾರ್ ಕಾರ್ಡ್ ಪ್ರತಿ, ಪೋಷಕರ ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ ಪ್ರತಿ, ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ಪ್ರತಿ (ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಲಿಂಕ್ ಮಾಡಿ NPCIUಗೆ ಮ್ಯಾಪಿಂಗ್ ಮಾಡಿರಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top